Share this... Whatsapp Facebook Pinterest Twitter Linkedin Gmail Printಹೆಚ್ಎಂಟಿ ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್; ಒಂದೇ ದಿನ #35 ಲಕ್ಷ ವಹಿವಾಟು ಹಾಸನ: ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಹೆಚ್’ಎಂಟಿ ಕೈಗಡಿಯಾರಗಳ ಮಾರಾಟ ದಾಖಲೆಯ ಪ್ರಮಾಣದಲ್ಲಿ ಆಗಿದ್ದು ಒಂದೇ ದಿನ ಸುಮಾರು ₹35 ಲಕ್ಷಕ್ಕೂ ಹೆಚ್ಚು ವಹಿವಾಟು ನಡೆದಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.\ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಸ್ವಾತಂತ್ರ್ಯ ದಿನದ ಪ್ರಯುಕ್ತ ಹೆಚ್ಎಂಟಿ ಕಂಪನಿಯು ವಿಶೇಷ ಆವೃತ್ತಿಯ ಕೆಲ ಅಪರೂಪದ ಕೈಗಡಿಯಾರಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಅಂದು ವಾಚ್ಚುಗಳ ಖರೀದಿಗೆ ಮುಗಿಬಿದ್ದ ಗ್ರಾಹಕರು ಸುಮಾರು ಎರಡು ವರೆ ಕಿಲೋಮೀಟರ್ ಗೂ ಹೆಚ್ಚು ದೂರ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಇದನ್ನು ಕಂಡು ನಾನು ಆಶ್ಚರ್ಯಚಕಿತನಾಗಿದ್ದೆ ಎಂದರು. ಅಂದು ನಮ್ಮ ಕಡೆಯಿಂದ ಸಾವಿರಾರು ಕೈ ಗಡಿಯಾರಗಳು ಮಾರಾಟವಾಗಿದ್ದು, ಒಂದೇ ₹35 ಲಕ್ಷ ವಹಿವಾಟು ನಡೆದಿರುವುದು ಕಂಪನಿಯನ್ನು ಪುನಶ್ಚೇತನಗೊಳಿಸುವ ನಮ್ಮ ಉದ್ದೇಶಕ್ಕೆ ಮತ್ತಷ್ಟು ಬಲ ನೀಡಿದೆ. ಹೆಚ್ಎಂ.ಟಿ ಗಡಿಯಾರಗಳ ಬಗ್ಗೆ ಜನರಲ್ಲಿ ಇವತ್ತಿಗೂ ಅಭಿಮಾನ ಗೌರವ ಇದೆ. ಹಿಂದೆ ಹಿಂದೆ ಹೆಚ್ಎಂಟಿ ಗಡಿಯಾರ ಕಟ್ಟುವುದು ಎಂದರೆ ಹೆಮ್ಮೆ ಮತ್ತು ಪ್ರತಿಷ್ಠೆಯ ಸಂಗತಿಯಾಗಿತ್ತು. ಆ ವೈಭವವನ್ನು ಮರಳಿ ತರುವುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿ ಗಂಭೀರ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸಚಿವರು ಪ್ರಶ್ನೆಗೆ ಉತ್ತರಿಸಿದರು. ಕಾರ್ಖಾನೆಗೆ ಮರುಜೀವ ನೀಡುವ ನಿಟ್ಟಿನಲ್ಲಿ ಎರಡು ವರ್ಷಗಳಿಂದ ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯೋಜನಾ ಆಯೋಗದ ಸದಸ್ಯರಾದ ವಿ.ಕೆ. ಸಾರಸ್ವತ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಠದ ಸಮಿತಿಯನ್ನು ರಚಿಸಲಾಗಿತ್ತು. ಈಗಾಗಲೇ ಸಮಿತಿ ವರದಿಯನ್ನು ನೀಡಿ ಕೆಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ. ಅದರಂತೆಯೇ ಕಾರ್ಖಾನೆಗೆ ಮರುಜೀವ ನೀಡಲು ಈಗಾಗಲೇ ಕೇಂದ್ರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರೊಂದಿಗೂ ಕೂಡ ಮತಕತೆ ನಡೆಸಿದ್ದೇನೆ ಎಂದು ಸಚಿವರು ಮಾಹಿತಿ ನೀಡಿದರು. ಯುವಕರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ: ದೊಡ್ಡ ಪ್ರಮಾಣದಲ್ಲಿ ಯುವಕರು ಸ್ವಾತಂತ್ರ್ಯ ದಿನ ವಾಚ್ ಗಳನ್ನು ಖರೀದಿ ಮಾಡಿದ್ದಾರೆ. ವಯಸ್ಸಿನ ಹಂಗಿಲ್ಲದೆ ಹಿರಿಯರು ಕಿರಿಯರು ಮಕ್ಕಳು ಕೂಡ ಸಾಲಿನಲ್ಲಿ ನಿಂತು ಗಡಿಯಾರಗಳನ್ನು ಖರೀದಿ ಮಾಡಿದ್ದಾರೆ. ಎಚ್ಎಂಟಿಯ ಮೇಲೆ ಅವರೆಲ್ಲರೂ ಇರಿಸಿರುವ ಅಭಿಮಾನಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಖ್ಯವಾಗಿ ಯುವಜನತೆ ನಮ್ಮ ಗಡಿಯಾರಗಳಿಗೆ ಅತಿಹೆಚ್ಚು ಅಭಿಮಾನ ತೋರುತ್ತಿದ್ದಾರೆ, ಅವರ ಬೆಂಬಲ ಹೀಗೆಯೇ ಇರಲಿ ಎಂದು ಸಚಿವ ಕುಮಾರಸ್ವಾಮಿ ಅವರು ಕೋರಿದರು. Share this... Whatsapp Facebook Pinterest Twitter Linkedin Gmail Print Post navigation ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ;ಕೊಲೆ ಶಂಕೆ ಮೀಸಲಾತಿ ಬದಲಾವಣೆ ಖಂಡಿಸಿ ಜೆಡಿಎಸ್ ಪ್ರತಿಭಟನೆ ಎಚ್ಚರಿಕೆ