Share this... Whatsapp Facebook Pinterest Twitter Linkedin Gmail Printಎಚ್.ಡಿ.ರೇವಣ್ಣ ವರ್ಸಸ್ ಡಿಸಿ ಲತಾಕುಮಾರಿ ಜಟಾಪಟಿ: ಎಕ್ಸ್ ಪೋಸ್ಟ್ ಮೂಲಕ ತಿರುಗೇಟು ನೀಡಿದ ಹಾಸನ ಜಿಲ್ಲಾಧಿಕಾರಿ ಹಾಸನ: ಗ್ರಾಮ ಪಂಚಾಯತ್ ಚುನಾವಣಾ ಮೀಸಲಾತಿ ನಿಗದಿ ವಿಚಾರದಲ್ಲಿ ತಮ್ಮ ವಿರುದ್ಧ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಗುರವಾಗಿ ಹಾಗೂ ಕೀಳುಮಟ್ಟದಲ್ಲಿ ಮಾತನಾಡಿದ್ದಾರೆ ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣಾ ಮೀಸಲಾತಿ ನಿಗದಿ ವಿಚಾರದಲ್ಲಿ ತಮ್ಮ ಕಾರ್ಯವೈಖರಿಯನ್ನು ಟೀಕಿಸಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಹರಿಹಾಯ್ದ ಬೆನ್ನಲ್ಲೇ, ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ತಮ್ಮ ಅಧಿಕೃತ ‘ಎಕ್ಸ್’ (X) ಖಾತೆ ಮೂಲಕ ತಿರುಗೇಟು ನೀಡಿದ್ದಾರೆ. “ನಿಮ್ಮನ್ನು ಹಿಡಿತದಲ್ಲಿಟ್ಟುಕೊಳ್ಳಲು ಆಗಲಿಲ್ಲವೆಂದರೆ ನಿಮ್ಮನ್ನು ದ್ವೇಷಿಸುತ್ತಾರೆ” ಎಂಬ ಅರ್ಥದ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಡಿಸಿ ಪರೋಕ್ಷವಾಗಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನಡುವಿನ ಈ ವಾಕ್ಸಮರವು ಹಾಸನ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳ ಮುಂದೆ ಅಧಿಕಾರಿಗಳನ್ನು ವೈಯಕ್ತಿಕವಾಗಿ ಟೀಕಿಸುವುದು ಸರಿಯಲ್ಲ ಎಂದು ಡಿಸಿ ಅಸಮಾಧಾನ ಹೊರಹಾಕಿದ್ದಾರೆ. ಇಂತಹ ವರ್ತನೆಯು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುವುದಲ್ಲದೆ, ಇಲಾಖೆಯ ಇತರ ಅಧಿಕಾರಿಗಳ ಮೇಲೂ ಮಾನಸಿಕ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ. Share this... Whatsapp Facebook Pinterest Twitter Linkedin Gmail Print Post navigation ಎಸ್ಐಆರ್ ಬಳಿಕ 1.67 ಲಕ್ಷ ಮತದಾರರು ಪಟ್ಟಿಯಿಂದ ಔಟ್ ಎಚ್.ಡಿ. ರೇವಣ್ಣ ಹೇಳಿಕೆಗೆ ಶ್ರೇಯಸ್ ಪಟೇಲ್ ತಿರುಗೇಟು