Share this... Whatsapp Facebook Pinterest Twitter Linkedin Gmail Printಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹಳೇಬೀಡು ಪಿಎಸ್ಐ ಹಾಸನ (ಹಳೇಬೀಡು) : 20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಳೇಬೀಡು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಮಂಜುನಾಥ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ. ಲೋಕಾಯುಕ್ತ ಬಲೆಗೆ ಬಿದ್ದ ಹಳೇಬೀಡು ಪಿಎಸ್ಐ ಮಂಜುನಾಥ್ ಘಟ್ಟದಹಳ್ಳಿ ಗ್ರಾಮದ ಸಂತೋಷ್ ಎಂಬುವರು ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. Advertisement ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದರು. ಅದರಂತೆ, ದೂರುದಾರರ ಮೂಲಕ ಲಂಚದ ಹಣ ನೀಡುವಂತೆ ವ್ಯವಸ್ಥೆ ಮಾಡಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, 20 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಅವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಲಂಚದ ಹಣವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ. ಮಂಜುನಾಥ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಪೊಲೀಸ್ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಳೇಬೀಡು ಪೊಲೀಸ್ ವಲಯದಲ್ಲಿ ಸಂಚಲನ ಮೂಡಿಸಿದೆ. Share this... Whatsapp Facebook Pinterest Twitter Linkedin Gmail Print Post navigation ಹಾಸನದಲ್ಲಿ ESI ಆಸ್ಪತ್ರೆ ನಿರ್ಮಾಣಕ್ಕೆ ಮನವಿ ಮಾನವ- ಪ್ರಾಣಿ ಸಂಘರ್ಷ; ತಜ್ಞರ ತಂಡ ಭೇಟಿಗೆ ಸಂಸದ ಮನವಿ