ಬೆಳೆ ವಿಮೆ ಮಾಡಿಸಿದ ಭಿತ್ತನೆ ಮಾಡದ ರೈತರಿಗೆ ತಾತ್ಕಾಲಿಕ ಪರಿಹಾರ: ಸಚಿವ ಶಿವಲಿಂಗೇಗೌಡ

ಹಾಸನ ಆ.6(ಅಕ್ಷರಮಿತ್ರ ಸುದ್ದಿ): ಜಿಲ್ಲೆಯ ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಕಲಗೂಡು ತಾಲ್ಲೂಕುಗಳಲ್ಲಿ ಶೇ. 80 ಭಾಗ ಬಿತ್ತನೆ ಆಗಿಲ್ಲದ ಕಾರಣ ವಿಮೆ ಮಾಡಿಸಿದ ಎಲ್ಲ ರೈತರಿಗೆ ಶೇ.25 ರಷ್ಟು ತಾತ್ಕಾಲಿಕ ಪರಿಹಾರ ನೀಡುವಂತೆ ಸಚಿವರಾದ ಕೆ.ಎಂ.ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲೆಯ ಆಲೂರು, ಬೇಲೂರು ಹಾಗೂ ಹಾಸನ ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ಮತ್ತು ಅತಿವೃಷ್ಟಿ ವೀಕ್ಷಣೆ ನಡೆಸಿ ಮಾತನಾಡಿದ ಅವರು ಮುಖ್ಯಮಂತ್ರಿ ನಿರ್ದೇಶನದಂತೆ ವೀಕ್ಷಣೆ ನಡೆಸಿ ಸರ್ಕಾರಕ್ಕೆ ವರದಿ ನೀಡಲಾಗುವುದು. ಬೆಳೆ ವಿಮೆ ಮಾಡಿಸಿರುವ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜೊತೆಗೂಡಿ ಪರಿಹಾರ ಒದಗಿಸಬೇಕಿದೆ. ಬೆಳೆ ವಿಮೆ ಮಾಡಿಸಿದ್ದು, ಮಳೆ ಕೊರತೆಯಿಂದ ಬಿತ್ತನೆ ಮಾಡಲು ಸಾಧ್ಯವಾಗದೆ ಇರುವ ರೈತರಿಗೆ ಶೇ.25 ರಷ್ಟು ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮುಸುಕಿನ ಜೋಳಕ್ಕೆ ಬಿಳಿಸುಳಿ ರೋಗ ಬಂದಿರುವುದರಿಂದ ರೈತರಿಗೆ ನಷ್ಟ ಉಂಟಾಗಿದೆ. ರೋಗಕ್ಕೆ ತುತ್ತಾಗಿರುವ ಜೋಳವನ್ನು ಜಾನುವಾರುಗಳಿಗೆ ಬಳಸದಂತೆ ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿ 

  • ಕೆ. ಎಂ ಶಿವಲಿಂಗೇಗೌಡ, ಸಚಿವ 

ಬಿತ್ತನೆ ಮಾಡಿ ಬೆಳೆ ಹಾನಿಯಾಗಿರುವ ಬಗ್ಗೆ ಕೃಷಿ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎನ್. ಡಿ. ಆರ್. ಎಫ್. ಮಾರ್ಗಸೂಚಿ ಅನ್ವಯ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ರೈತರಿಗೆ ಅಧಿಕಾರಿಗಳು ವಿಮೆ ಯೋಜನೆಯ ಬಗ್ಗೆ ಮಾಹಿತಿ ನೀಡಿ ಬೆಳೆ ವಿಮೆ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ರೈತರು ಬೆಳೆಗೆ ವಿಮೆ ಕಟ್ಟಬೇಕು ಎಂದರು.

ಜಿಲ್ಲೆಯಲ್ಲಿ ಮುಸುಕಿನ ಜೋಳಕ್ಕೆ ಬಿಳಿಸುಳಿ ರೋಗ ಬಂದಿರುವುದರಿಂದ ರೈತರಿಗೆ ನಷ್ಟ ಉಂಟಾಗಿದೆ. ರೋಗಕ್ಕೆ ತುತ್ತಾಗಿರುವ ಜೋಳವನ್ನು ಜಾನುವಾರುಗಳಿಗೆ ಬಳಸದಂತೆ ಜನರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಫಸಲ್ ಭೀಮಾ ಯೋಜನೆ ಅಡಿ ಬಹಳ ಪ್ರಮಾಣದಲ್ಲಿ ರೈತರು ಪರಿಹಾರವನ್ನು ಪಡೆದುಕೊಳ್ಳುತ್ತಿದ್ದಾರೆ, ಅರಸೀಕೆರೆ ಕ್ಷೇತ್ರದಲ್ಲಿ 24 ಕೋಟಿ ಪರಿಹಾರವನ್ನು ಫಸಲ್ ಭೀಮಾ ಯೋಜನೆ ಅಡಿ ಪರಿಹಾರ ಪಡೆದುಕೊಂಡಿದ್ದಾರೆ ಎಂದರು.

ತಂಡದಲ್ಲಿ ಸಂಸದ ಶ್ರೇಯಸ್ ಎಂ ಪಟೇಲ್, ಶಾಸಕ ಸಿಮೆಂಟ್ ಮಂಜು, ಮಾಜಿ ಸಚಿವ ಬಿ.ಶಿವರಾಂ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಜಂಟಿ ಕೃಷಿ ನಿರ್ದೇಶಕ ರಮೇಶ್ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *