Share this... Whatsapp Facebook Pinterest Twitter Linkedin Gmail Printಚನ್ನರಾಯಪಟ್ಟಣದ ವಿವಿಧ ಗ್ರಾಮಗಳಲ್ಲಿ ಬರ ಅಧ್ಯಯನ ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಮೊದಲ ಬಾರಿಗೆ ಹಾಸನ ಜಿಲ್ಲೆಗೆ ಭೇಟಿ ನೀಡಿದ ಕೆ.ಎಂ. ಶಿವಲಿಂಗೇಗೌಡ, ಚನ್ನರಾಯಪಟ್ಟಣ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಉಂಟಾಗಿರುವ ಬರ ಹಾಗೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮಗಳ ಕುರಿತು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಹಾಸನ ಸಂಸದ ಶ್ರೇಯಸ್ ಪಟೇಲ್, ಸ್ಥಳೀಯ ಅಧಿಕಾರಿಗಳು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ, ಜನರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಸಂಕಷ್ಟದಲ್ಲಿರುವ ರೈತರ ಪರವಾಗಿ ಸರ್ಕಾರ ಅಗತ್ಯ ನೆರವು ನೀಡಲಿದೆ. ಸಚಿವರಾದ ಮರುದಿನವೇ ಶಿವಲಿಂಗೇಗೌಡ ಬರ ಅಧ್ಯಯನ ಕೈಗೊಂಡಿರುವುದು ಸರ್ಕಾರ ರೈತರ ಪರ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಮುಂದಿನ ದಿನದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗುತ್ತದೆ ಎಂಬ ವಿಶ್ವಾಸ ನಮಗಿದೆ. ಎಂ.ಎ ಗೋಪಾಲಸ್ವಾಮಿ,ಮಾಜಿ ವಿಧಾನ ಪರಿಷತ್ ಸದಸ್ಯರು Share this... Whatsapp Facebook Pinterest Twitter Linkedin Gmail Print Post navigation ಮಕ್ಕಳಿಗೆ ಮೆದುಳಿನ ಆರೋಗ್ಯದ ಬಗ್ಗೆ ಅರಿವು ಕಾರ್ಯಕ್ರಮ ಬರಗಾಲ ಎಂದು ಘೋಷಣೆ ಮಾಡಿ ಪರಿಹಾರಕ್ಕೆ ಕೆಪಿಆರ್ಎಸ್ ಅಗ್ರಹಾರ