Share this... Whatsapp Facebook Pinterest Twitter Linkedin Gmail Printಅಸಾಧಾರಣ ಸಾಧನೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ ಹಾಸನ ಆ.7 (ಅಕ್ಷರಮಿತ್ರ ಸುದ್ದಿ): ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡುವ ಕುರಿತು ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೋಗ್ಯವಾದ ಸಾಧನೆಯನ್ನು ಮಾಡಿರುವಂತಹ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲಾ ಮಟ್ಟದ ಪ್ರಶಸ್ತಿಯು ರೂ. 10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ, ಈಗಾಗಲೆ ಹಿಂದಿನ ವರ್ಷಗಳಲ್ಲಿ ಆಯ್ಕೆಯಾಗಿರುವ ಮಕ್ಕಳನ್ನು ಹೊರತುಪಡಿಸಿ, ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರತಕ್ಕದ್ದು, ಅಸಾಧಾರಣ ಸಾಧನೆಯನ್ನು ಮಾಡಿರುವಂತಹ 4 ಕ್ಷೇತ್ರಗಳಿಂದ 8 ಮಕ್ಕಳನ್ನು ಆಯ್ಕೆ ಮಾಡಲು ಅವಕಾಶವಿದ್ದು. ಸದರಿ ಪ್ರಶಸ್ತಿಗಳಿಗೆ ಪೂರಕ ದಾಖಲಾತಿಗಳನ್ನು ಒದಗಿಸುವುದು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. 2026-27ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇಲ್ಲಿಂದ ಪಡೆದು, ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸೆ.6 ಒಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಈ ಕಛೇರಿಗೆ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172 295218 ಅನ್ನು ಸಂಪರ್ಕಿಸಬಹುದಾಗಿದೆ. Share this... Whatsapp Facebook Pinterest Twitter Linkedin Gmail Print Post navigation ಸ್ವಾತಂತ್ರ್ಯೋತ್ಸವದ ದಿನ ಸಾಧಕರಿಗೆ ಸನ್ಮಾನ ಹಾಸನದಿಂದ ಜೋಗ ಜಲಪಾತಕ್ಕೆ ಪ್ರವಾಸ