ಜೈಲಿನಲ್ಲಿರುವ ಪ್ರಜ್ವಲ್‌ ರೇವಣ್ಣಗೆ ಹುಟ್ಟುಹಬ್ಬದ ಶುಭಾಶಯ: ಎರಡು ವರ್ಷದ ಬಳಿಕ ಕಾಣಿಸಿಕೊಂಡ ಫ್ಲೆಕ್ಸ್‌ಗಳು

ಅಕ್ಷರಮಿತ್ರ, ಹಾಸನ

ಹಾಸನ: ಸುಮಾರು ಎರಡು ವರ್ಷಗಳ ಬಳಿಕ ಹಾಸನ ಜಿಲ್ಲೆಯಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಭಾವಚಿತ್ರವಿರುವ ಫ್ಲೆಕ್ಸ್‌ಗಳು ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ.

ಪ್ರಜ್ವಲ್‌ ರೇವಣ್ಣ ಅವರ ಜನ್ಮದಿನದ ಅಂಗವಾಗಿ ಹೊಳೆನರಸೀಪುರ ಪಟ್ಟಣದ ಅಂಬೇಡ್ಕರ್ ವೃತ್ತ ಹಾಗೂ ಮಹಾತ್ಮ ಗಾಂಧಿ ವೃತ್ತ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬೆಂಬಲಿಗರು ಬೃಹತ್ ಫ್ಲೆಕ್ಸ್‌ಗಳನ್ನು ಅಳವಡಿಸಿ ಶುಭಾಶಯ ಕೋರಿದ್ದಾರೆ. ಫ್ಲೆಕ್ಸ್‌ಗಳಲ್ಲಿ ಪ್ರಜ್ವಲ್‌ ರೇವಣ್ಣ ಅವರ ಭಾವಚಿತ್ರದ ಜೊತೆಗೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಚಿತ್ರಗಳನ್ನೂ ಪ್ರಕಟಿಸಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ ಪ್ರಜ್ವಲ್‌ ರೇವಣ್ಣ ವಿರುದ್ಧದ ಒಂದು ಪ್ರಕರಣದಲ್ಲಿ ನ್ಯಾಯಾಲಯ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಸ್ತುತ ಅವರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿಯೇ ಅವರ ಬೆಂಬಲಿಗರು ಸಾರ್ವಜನಿಕ ಸ್ಥಳಗಳಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿ ಫ್ಲೆಕ್ಸ್‌ಗಳನ್ನು ಅಳವಡಿಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪ್ರಜ್ವಲ್‌ ರೇವಣ್ಣ ಬಂಧನದ ಬಳಿಕ ಜಿಲ್ಲೆಯಲ್ಲಿ ಅವರ ಪರವಾಗಿ ಯಾವುದೇ ಫ್ಲೆಕ್ಸ್‌ಗಳು ಅಥವಾ ಸಾರ್ವಜನಿಕ ಪ್ರದರ್ಶನಗಳು ಕಾಣಿಸಿಕೊಂಡಿರಲಿಲ್ಲ. ಇದೀಗ ಎರಡು ವರ್ಷಗಳ ಬಳಿಕ ಮತ್ತೆ ಅವರ ಭಾವಚಿತ್ರದ ಫ್ಲೆಕ್ಸ್‌ಗಳು ಕಾಣಿಸಿಕೊಂಡಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

  •  ಲಕ್ಷ್ಮಣ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಳೆನರಸೀಪುರ

ಈ ಬೆಳವಣಿಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಬೆಂಬಲ ಹಾಗೂ ವಿರೋಧದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಸ್ಥಳೀಯ ರಾಜಕೀಯ ವಲಯದಲ್ಲಿಯೂ ಈ ಫ್ಲೆಕ್ಸ್‌ಗಳ ಅಳವಡಿಕೆ ಕುರಿತು ವಿವಿಧ ರೀತಿಯ ಅಭಿಪ್ರಾಯಗಳು ಕೇಳಿಬರುತ್ತಿವೆ.

Leave a Reply

Your email address will not be published. Required fields are marked *