Share this... Whatsapp Facebook Pinterest Twitter Linkedin Gmail Printರಾಹುಲ್ ಗಾಂಧಿ ಜೊತೆ ಸಂವಾದದಲ್ಲಿ ಭಾಗಿಯಾಗಲು ನೀಡಿದ್ದ ಆಹ್ವಾನ ನಿರಾಕರಿಸಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಪುಣೆ (ಮಹಾರಾಷ್ಟ್ರ): ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೆನ್ನೆ ವಿದ್ಯಾರ್ಥಿಗಳ ಜೊತೆ ಸಂವಾದ (ಛತ್ತೋನ್ ಕಿ ಗೂಂಜ್) ಕಾರ್ಯಕ್ರಮಕ್ಕಾಗಿ ಪುಣೆಗೆ ಆಗಮಿಸಿದ್ದರು. ಇಲ್ಲಿನ ಇಂಜಿನಿಯರಿಂಗ್ ಕಾಲೇಜಿನ ಶುಲ್ಕ ಮತ್ತು ಆಡಳಿತ ಮಂಡಳಿಯ ವಿರುದ್ಧ ಧ್ವನಿ ಎತ್ತಿದ್ದ ವಿದ್ಯಾರ್ಥಿನಿಯನ್ನು ಕಾರ್ಯಕ್ರಮದಲ್ಲಿ ಭಾಗಿಯಾಗಿ, ರಾಹುಲ್ ಗಾಂಧಿಯನ್ನು ಭೇಟಿಯಾಗಲು ಆಹ್ವಾನ ನೀಡಲಾಗಿತ್ತು. ಆದರೆ, ಈ ಆಹ್ವಾನವನ್ನು ವಿದ್ಯಾರ್ಥಿನಿ ತಿರಸ್ಕರಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶ ಹರಿಬಿಟ್ಟಿರುವ ವಿದ್ಯಾರ್ಥಿನಿ, “ಸಂವಾದ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕೆ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು. ನಾನು ಸದ್ಯಕ್ಕೆ ಯಾವುದೇ ವಿಷಯದ ಕುರಿತು ಮಾತನಾಡಲು ಮಾನಸಿಕವಾಗಿ ಸಿದ್ಧವಾಗಿಲ್ಲ. ಜೊತೆಗೆ ನಾನು ಸಾಮಾನ್ಯ ವಿದ್ಯಾರ್ಥಿನಿ. ನನ್ನನ್ನು ಯಾರೂ ರಾಜಕೀಯಕ್ಕಾಗಿ ಬಳಸಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಕಾಲೇಜು ಕ್ಯಾಂಪಸ್ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ನನ್ನನ್ನೂ ರಾಜಕೀಯಕ್ಕೆ ಎಳೆಯಬೇಡಿ. ಇದಲ್ಲದೇ, ಪ್ರತಿಭಟನಾಕಾರರು ಮತ್ತು ನನಗೂ ಯಾವುದೇ ಸಂಬಂಧವಿಲ್ಲ. ರಾಜಕೀಯವು, ನಮ್ಮ ಕಾಲೇಜಿನ ವಾತಾವರಣವನ್ನು ಹಾಳು ಮಾಡಿದೆ ಎಂದು ಆಕೆ ಬೇಸರಿಸಿದ್ದಾರೆ. ಕಾಲೇಜಿನಲ್ಲಿ ಘರ್ಷಣೆ: ರಾಹುಲ್ ಗಾಂಧಿ ಅವರ ಕಾರ್ಯಕ್ರಮಕ್ಕೂ ಮುನ್ನ ಸಿಒಇಪಿ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಮತ್ತು ಎನ್ಎಸ್ಯುಐ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ. ರಾಹುಲ್ ಗಾಂಧಿಯವರ ಭೇಟಿಗಾಗಿ ಕಾಂಗ್ರೆಸ್ ಮತ್ತು ಎನ್ಎಸ್ಯುಐ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಆಗಸ್ಟ್ 21ರ ತಡರಾತ್ರಿ ಕಾಲೇಜಿನ ಹಾಸ್ಟೆಲ್ ಆವರಣದಲ್ಲಿ ಉಭಯ ಸಂಘಟನೆಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಗಲಾಟೆಯ ನಂತರ ಪುಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಎಬಿವಿಪಿ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ 50 ಕ್ಕೂ ಅಧಿಕ ಯೂತ್ ಕಾಂಗ್ರೆಸ್ ಮತ್ತು ಎನ್ಎಸ್ಯುಐ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ರಾಹುಲ್ ಗಾಂಧಿ ಅವರ ವಿದ್ಯಾರ್ಥಿ ಸಂವಾದ ಕಾರ್ಯಕ್ರಮವಕ್ಕೂ ಮುನ್ನವೇ, ಈ ರಾಜಕೀಯ ಹಗ್ಗಜಗ್ಗಾಟ ಹಾಗೂ ವಿದ್ಯಾರ್ಥಿನಿಯ ನಿರಾಕರಣೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. Share this... Whatsapp Facebook Pinterest Twitter Linkedin Gmail Print Post navigation ಮಾಜಿ ಶಾಸಕ ಪ್ರೀತಮ್ ಗೌಡ ವಿರುದ್ಧ ಎಫ್ ಐ ಆರ್ !? ನೈಸ್ ಹಗರಣ;ರಾಜ್ಯಪಾಲರಿಗೆ ದೂರು ನೀಡಿದ ಜೆಡಿಎಸ್