Share this... Whatsapp Facebook Pinterest Twitter Linkedin Gmail Printಆಸ್ಟ್ರೇಲಿಯಾದ ಮೆಲ್ಬೋರ್ನ್ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ “ಪುಟ್ಟಣ್ಣನ ಕತ್ತೆ”! ಗೊರೂರು ಅನಂತರಾಜು, ಹಾಸನ. Mob: 9449462879 ಹಾಸನ: ಅತ್ಯಂತ ಸೂಕ್ಷ್ಮ ಕಥಾನಕಗಳ ಮೂಲಕವೇ ನಿರ್ದೇಶಕರಾಗಿ ನೆಲೆ ಕಂಡುಕೊಂಡಿರುವ ಸಿದ್ದು ಪೂರ್ಣಚಂದ್ರ ಇದೀಗ ಪುಟ್ಟಣ್ಣನ ಕತ್ತೆ (Puttanna’s Donkey )ಎಂಬ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಈ ಚಿತ್ರ ಈಗ ಪ್ರತಿಷ್ಠಿತ ಮೆಲ್ಬೋರ್ನ್ ಫಿಲಂ ಫೆಸ್ಟಿವಲ್(MFF)ಗೆ ಆಯ್ಕೆಯಾಗಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ನಡೆಯಲಿರುವ ಈ ಸಿನಿಮೋತ್ಸವದಲ್ಲಿ ಪುಟ್ಟಣ್ಣನ ಕತ್ತೆ ಚಿತ್ರ ಪ್ರದರ್ಶನಗೊಳ್ಳಲಿದೆ. ಮೆಲ್ಬೋರ್ನ್ ಫಿಲಂ ಫೆಸ್ಟಿವಲ್ ಗೆ ಜಾಗತಿಕ ಮಟ್ಟದ ಘನತೆ ಗೌರವವಿದೆ. ಈ ಸಿನಿಮೋತ್ಸವಕ್ಕೆ ಸಿನಿಮಾ ಆಯ್ಕೆಯಾಗುವುದು ಮಹತ್ವದ್ದಾಗಿದೆ. ಜಾಗತಿಕ ಮಟ್ಟದ ಪೈಪೋಟಿಯಿಂದ ಕೂಡಿದ ಸ್ಪರ್ಧೆ ದಾಟಿ ಆಯ್ಕೆಯಾಗುವಲ್ಲಿ ಗುಣಮಟ್ಟದ ಚಿತ್ರಕಥೆ ಹೊಂದಿರಬೇಕು. ಈ ನಿಟ್ಟಿನಲ್ಲಿ ಕನ್ನಡ ಸಿನಿಮಾ ‘ಪುಟ್ಟಣ್ಣನ ಕತ್ತೆ’ (Puttanna’s Donkey ) ಈ ಸಿನಿಮೋತ್ಸವಕ್ಕೆ ಆಯ್ಕೆಯಾಗಿರುವುದು ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಕತ್ತೆಯೊಂದು ಚಿತ್ರಕಥೆಯಲ್ಲಿ ಕೇಂದ್ರ ಬಿಂದುವಾಗಿ ರೂಪುಗೊಂಡಿದೆ. ಬೆಂಗಳೂರಿನಲ್ಲಿ ಕತ್ತೆ ಹಾಲು ಮಾರುವವರು ಬರುತ್ತಿರುತ್ತಾರೆ. ಹೀಗೆ ಹಳ್ಳಿಯೊಂದರಿಂದ ಕತ್ತೆಯೊಂದಿಗೆ ಪಟ್ಟಣ ಸೇರಿದವನ ಸುತ್ತ ಘಟಿಸುವ ಆಸಕ್ತಿದಾಯಕ ಸನ್ನಿವೇಶಗಳು ಈ ಸಿನಿಮಾದ ಆಂತರ್ಯದಲ್ಲಿದೆ. ಭೀಮೇಶ್ ಗೌಡ ಈ ಕಥನದ ಆತ್ಮದಂಥಾ ಪುಟ್ಟಣ್ಣನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನೀಶ್ ಆರ್ಯನ್ ಈ ಸಿನಿಮಾದ ನಾಯಕರಾಗಿ ಸಂಕೀರ್ಣ ಪಾತ್ರದಲ್ಲಿ ನಟಿಸಿದ್ದಾರೆ. ಪೂರ್ಣಚಂದ್ರ ಫಿಲಂಸ್ ಬ್ಯಾನರ್ ಅಡಿಯಲ್ಲಿ ತನ್ಮಯ್ ಎಸ್ ಗೌಡ ನಿರ್ಮಾಣ ಮಾಡಿರುವ. ಸಿದ್ದು ಪೂರ್ಣಚಂದ್ರ ಕಥೆ ಚಿತ್ರಕಥೆ, ಸಂಭಾಷಣೆಯೊಂದಿಗೆ ನಿರ್ದೇಶನ ಮಾಡಿದ್ದಾರೆ. ಅನೀಶ್ ಆರ್ಯನ್, ಭೀಮೇಶ್ ಗೌಡ, ಎನ್.ಟಿ ರಾಮಸ್ವಾಮಿ, ಕವಿತಾ ಕಂಬಾರ್, ವಿಭಾ, ಕಲಾರತಿ ಮಹದೇವ್, ರೋಹಿಣಿ, ರಶ್ಮಿ ಮೈಸೂರ್, ಲಕ್ಕಿ ಶಂಕರ್, ವಾಸು, ರಾಕಿ, ಮಂಡ್ಯ ಸಿದ್ದು ಮುಂತಾದವರ ತಾರಾಗಣವಿದೆ. ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ಅನಂತ್ ಆರ್ಯನ್ ಸಂಗೀತ ನಿರ್ದೇಶನ ಮತ್ತು ದೀಪು ಸಿ.ಎಸ್ ಅವರ ಸಂಕಲನ ಈ ಚಿತ್ರಕ್ಕಿದೆ. Share this... Whatsapp Facebook Pinterest Twitter Linkedin Gmail Print Post navigation ಕನ್ನಡದ ಮೇರು ನಟನಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಜೆಗಳ ಕುಂದುಕೊರತೆ ಪರಿಹಾರಕ್ಕೆ ಪ್ರಜಾಸೇವಾ ಉತ್ತಮ ವೇದಿಕೆ