Share this... Whatsapp Facebook Pinterest Twitter Linkedin Gmail Print1400 ವರ್ಷಗಳ ಹಿನ್ನೆಲೆಯುಳ್ಳ ಪುರಾತನ ದೇವಾಲಯದಲ್ಲಿ ಕಳ್ಳತನ ಹಾಸನ: ಸುಮಾರು 1400 ವರ್ಷಗಳ ಇತಿಹಾಸ ಹೊಂದಿರುವ ಜಿಲ್ಲೆಯ ಪ್ರಸಿದ್ಧ ದೊಡ್ಡಗದ್ದವಳ್ಳಿ ಮಹಾಲಕ್ಷ್ಮಿ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಯಲ್ಲಿ ಖದೀಮರು ದೇವಾಲಯಕ್ಕೆ ನುಗ್ಗಿ, ಮಂಗಳಾರತಿಯ ತಟ್ಟೆ ಸೇರಿದಂತೆ ತಾಮ್ರ ಹಾಗೂ ಬೆಳ್ಳಿಯಿಂದ ತಯಾರಿಸಲಾದ ಹಲವು ಪೂಜಾ ಸಾಮಗ್ರಿಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಸುಮಾರು 30ರಿಂದ 40 ಸಾವಿರ ರೂಪಾಯಿ ಮೌಲ್ಯದ ತಾಮ್ರ ಮತ್ತು ಬೆಳ್ಳಿ ವಸ್ತುಗಳು ಕಳ್ಳತನವಾಗಿರುವು -ದಾಗಿ ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ದೇವಾಲಯದಲ್ಲಿದ್ದ ಕೆಲ ಬೆಳ್ಳಿ ವಸ್ತುಗಳನ್ನು ಖದೀಮರು ಅಲ್ಲಿಯೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಶಿವನ ಪ್ರಭಾವಳಿ ಸೇರಿದಂತೆ ಹಲವು ವಸ್ತುಗಳನ್ನು ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ. ದೇವಾಲಯದ ಸಿಸಿಟಿವಿ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿರುವ ಸಾಧ್ಯತೆ ಇದ್ದು, ಪೊಲೀಸರು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಐತಿಹಾಸಿಕ ದೇವಾಲಯವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಸಾಧ್ಯತೆ ಇದೆ. Share this... Whatsapp Facebook Pinterest Twitter Linkedin Gmail Print Post navigation ಮಾನವೀಯತೆ ಮತ್ತು ತವರು ಪ್ರೀತಿಗೆ ಸಾಕ್ಷಿಯಾದ ಹೆಚ್ಡಿಕೆ ಅರಕಲಗೂಡಿನಲ್ಲಿ ಶಂಕಿತ ಉಗ್ರನ ಬಂಧನ