Share this... Whatsapp Facebook Pinterest Twitter Linkedin Gmail Printತಮಿಳುನಾಡಿಗೆ ನೀರು ಕೊಟ್ಟು ಜಿಲ್ಲೆಯ ರೈತರಿಗೆ ಸರ್ಕಾರದಿಮದ ಅನ್ಯಾಯ –ನಾರಾಯಣಗೌಡ ಹಾಸನ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇದ್ದು, ರೈತರು ಬೆಳೆ ಬೆಳೆಯಲು ತೀವ್ರ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಹೇಮಾವತಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಆದರೆ ಹಾಸನ ಜಿಲ್ಲೆಯ ರೈತರಿಗೆ ನೀರು ನೀಡದಿರುವುದು ಖಂಡನೀಯ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾರಾಯಣಗೌಡ ಬಿ.ಹೆಚ್. ಆರೋಪಿಸಿದರು. advertisement ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೇಮಾವತಿ ಜಲಾಶಯದ ನೀರಿನಿಂದ ಭತ್ತ ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆದೇಶಿಸಿರುವುದರಿಂದ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಪಕ್ಕದ ತಮಿಳುನಾಡಿಗೆ ನೀರು ಹರಿಸಿರುವುದು ಜಿಲ್ಲೆಯ ರೈತರಿಗೆ ಅನ್ಯಾಯವಾಗಿದೆ ಎಂದು ಹೇಳಿದರು. Advertisement ತಮಿಳುನಾಡಿನಲ್ಲಿ ಈಗಾಗಲೇ ಎರಡು ಬೆಳೆಗಳನ್ನು ಬೆಳೆಯಲಾಗಿದ್ದು, ಹಾಸನ ಸೇರಿದಂತೆ ಹೇಮಾವತಿ ನೀರಿನ ಅವಲಂಬಿತ ಪ್ರದೇಶಗಳ ರೈತರಿಗೆ ಬೆಳೆ ಬೆಳೆಯಲು ನೀರು ದೊರೆಯುತ್ತಿಲ್ಲ. ಇದರಿಂದ ಹಾಸನ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳ ರೈತರಿಗೆ ಅನಾನುಕೂಲವಾಗುವುದರ ಜೊತೆಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಗೊರೂರು ಅಣೆಕಟ್ಟೆಯ ಮುಖ್ಯ ಇಂಜಿನಿಯರ್ ಅವರಿಗೆ ನೀರು ಹರಿಸುವಂತೆ ಮನವಿ ಸಲ್ಲಿಸಲಾಗಿದೆ. ಪ್ರಸ್ತುತ ಜಲಾಶಯ ಪೂರ್ಣಗೊಳ್ಳಲು ಕೇವಲ ಏಳು ಅಡಿ ನೀರು ಬರಬೇಕಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರೈತರಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಮುಖ್ಯಮಂತ್ರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಜಿಲ್ಲೆಯ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬೆಳೆ ಬೆಳೆಯಲು ಅನುಕೂಲವಾಗುವಂತೆ ನೀರು ಹರಿಸಬೇಕು. ಅಲ್ಲದೆ ಹಾಸನ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು. ಮನವಿಯನ್ನು ತಿರಸ್ಕರಿಸಿ ರೈತರಿಗೆ ತೊಂದರೆ ಮುಂದುವರಿಸಿದರೆ ಜಿಲ್ಲಾಧಿಕಾರಿ ಕಚೇರಿ ಹಾಗೂ ಅಣೆಕಟ್ಟೆಯ ಮುಖ್ಯ ಇಂಜಿನಿಯರ್ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮೋಹನ್, ಯೋಗೇಶ್ ಗೌಡ, ನಟರಾಜ್, ಮಹೇಶ್ ಹಾಗೂ ವೇದಾವತಿ ಉಪಸ್ಥಿತರಿದ್ದರು. Share this... Whatsapp Facebook Pinterest Twitter Linkedin Gmail Print Post navigation ಮಲ್ನಾಡ್ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ರೈತರ ಭೂಮಿ ಲೂಟಿಯೊಡೆದು ಸಾಮ್ರಾಜ್ಯ ಕಟ್ಟುತ್ತೀರಾ..? ಹೆಚ್ಡಿಕೆ