BJP ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡಗೆ ಸಂಕಷ್ಟ!

  • ಆದಾಯ ಮೀರಿ ಆಸ್ತಿ ಗಳಿಕೆ 
  • FIR ದಾಖಲಿಸಿ ತನಿಖೆ ಮಾಡಿ
  • ಹಾಸನ ಲೋಕಾಯುಕ್ತ ಎಸ್ಪಿ ನಂದಿನಿ ಗೆ 
  • ಜನಪ್ರತಿನಿಧಿಗಳನ್ಯಾಯಾಲಯ ಆದೇಶ

ಬೆಂಗಳೂರು: ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಹಾಸನ ಲೋಕಾಯುಕ್ತ ಎಸ್ಪಿಗೆ ಆದೇಶಿಸಿದೆ.

ಮಾಜಿ ಶಾಸಕ ಪ್ರೀತಂಗೌಡ ಅವರ 2018 ಹಾಗೂ 2023ರ ಚುನಾವಣಾ ಪ್ರಮಾಣಪತ್ರದಲ್ಲಿನ ವಿವರಗಳನ್ನು ಪರಿಶೀಲಿಸಿದಾಗ ಕುಟುಂಬದ ಆಸ್ತಿಯಲ್ಲಿ ಭಾರೀ ಏರಿಕೆಯಾಗಿದೆ. ಈ ನಿಟ್ಟಿನಲ್ಲಿಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇರೆಗೆ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಬಿ.ಪಿ. ಸಂದೀಪ್‌ ಎಂಬುವವರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ. ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಹಾಸನ ಲೋಕಾಯುಕ್ತ ಎಸ್ಪಿಗೆ ಆದೇಶ ಮಾಡಿದ್ದು, ಮಾಜಿ ಶಾಸಕ ಪ್ರೀತಂಗೌಡ ಅವರ 2018 ಹಾಗೂ 2023ರ ಚುನಾವಣಾ ಪ್ರಮಾಣ ಪತ್ರದಲ್ಲಿನ ವಿವರದಲ್ಲಿ ಆದಾಯದ ವಿವರಗಳನ್ನು ಮರೆಮಾಚಲಾಗಿದೆ ಎನ್ನಲಾಗಿದೆ.

ಈ ದೂರಿನ ವಿಚಾರಣೆ ನಡೆಸಿದ ಶಾಸಕರು – ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಬಿ. ಶಿವಪ್ರಸಾದ್‌, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹಾಸನ ಎಸ್ಪಿಗೆ ಆದೇಶಿಸಿದರು.

ಸತ್ಯಾಂಶ ಮರೆಮಾಚಲಾಗಿದೆ:ಪ್ರೀತಂಗೌಡ ಎರಡು ಚುನಾವಣೆ ಸಂದರ್ಭಗಳಲ್ಲಿ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಆಸ್ತಿ ಮತ್ತು ಆದಾಯ ವಿವರಗಳಲ್ಲಿ ಸತ್ಯಾಂಶ ಮರೆಮಾಚಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯಿದೆ-1988 ರ ಕಲಂ 13(2)ರ ಅನ್ವಯ ಎಫ್‌ಐಆರ್‌ ದಾಖಲಿಸಿ ವರದಿ ಸಲ್ಲಿಸುವಂತೆ ಹಾಸನ ಲೋಕಾಯುಕ್ತ ಎಸ್‌ಪಿಗೆ ನಿರ್ದೇಶಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ಅಕ್ಟೋಬರ್‌ 22ಕ್ಕೆ ಮುಂದೂಡಿದರು.

Leave a Reply

Your email address will not be published. Required fields are marked *