Share this... Whatsapp Facebook Pinterest Twitter Linkedin Gmail Printಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸವಿದೆ: ಡಿಕೆ ಶಿವಕುಮಾರ್ ಅಕ್ಷರಮಿತ್ರ, ಹಾಸನ ಬೆಂಗಳೂರು: ನಾವು ಒಂದು ವರ್ಷಗಳ ಮುಂಚಿತವಾಗಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆ ಸಂಬಂಧ ಸಚಿವರು ಹಾಗೂ ಪಕ್ಷದ ಶಾಸಕರ ಸಭೆ ಬಳಿಕ ಕೆಪಿಸಿಸಿ ಕಚೇರಿ ಬಳಿ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಈಗ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದೇ ಚುನಾವಣೆ ಕುರಿತು ಶಾಸಕರೊಂದಿಗೆ ಸಭೆ ನಡೆಸಿ ಮಾರ್ಗದರ್ಶನ ನೀಡಲಾಗಿದೆ. ಎಲ್ಲಾ ಮಂತ್ರಿಗಳು ಹಾಗೂ ಶಾಸಕರು ಜವಾಬ್ದಾರಿ ವಹಿಸಿಕೊಂಡು ಚುನಾವಣೆ ಮಾಡಲಿದ್ದಾರೆ. ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದರು. ದೆಹಲಿ ಪ್ರಯಾಣದ ಬಗ್ಗೆ ಕೇಳಿದಾಗ, ಭೇಟಿಗೆ ಸಮಯವಕಾಶ ಕೇಳಿ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಸಮಯ ನೀಡಿದ ಬಳಿಕ ಸರ್ವಪಕ್ಷ ಸಭೆ ಕರೆದುಕೊಂಡು ಹೋಗಲಾಗುವುದು ಎಂದು ತಿಳಿಸಿದರು. ಸರ್ವಪಕ್ಷ ನಿಯೋಗ ದೆಹಲಿಗೆ ತೆರಳುವ ಬಗ್ಗೆ ಕೇಳಿದಾಗ, ಬರ ಪರಿಹಾರ ಮತ್ತು ಕೇಂದ್ರದ ನೆರವಿನ ಕುರಿತು ಚರ್ಚಿಸಲು ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧರಿಸಲಾಗಿದೆ. ಇದಕ್ಕೆ ಎಲ್ಲಾ ಪಕ್ಷದ ನಾಯಕರು ಸಮ್ಮತಿಸಿದ್ದಾರೆ ಎಂದು ಹೇಳಿದರು. ಯಾವ ಚುನಾವಣೆ ಇದು? ಕರ್ನಾಟಕ ವಿಧಾನ ಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಹಾಲಿ ಸದಸ್ಯರ ಅಧಿಕಾರಾವಧಿ ನವೆಂಬರ್ 11ಕ್ಕೆ ಮುಕ್ತಾಯವಾಗಲಿದೆ. ಅಕ್ಟೋಬರ್ 23ರಂದು ಮತದಾನ ಹಾಗೂ 27ರಂದು ಮತ ಎಣಿಕೆ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಮಂಗಳವಾರದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಕಣಕ್ಕಿಳಿಯುತ್ತಿರುವ ಅಭ್ಯರ್ಥಿಗಳ ವಿವರಗಳು: 01. ಪದವೀಧರ ಕ್ಷೇತ್ರಗಳು (Graduates’ Constituencies) ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ. ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದಿಂದ ಶಶಿ ಹುಲಿಕುಂಟೆಮಠ್. 2. ಶಿಕ್ಷಕರ ಕ್ಷೇತ್ರಗಳು (Teachers’ Constituencies) ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ: ಮಾಜಿ ಎಂಎಲ್ಸಿ ಶರಣಪ್ಪ ಮಟ್ಟೂರ್. ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಹಾಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣರನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದ್ದಾರೆ. ಇನ್ನು ಆಗ್ನೇಯ ಪದವೀಧರರ ಕ್ಷೇತ್ರದ ಚಿದಾನಂದ ಎಂ. ಗೌಡ, ಪಶ್ಚಿಮ ಪದವೀಧರರ ಕ್ಷೇತ್ರದ ಎಸ್.ವಿ. ಸಂಕನೂರ, ಈಶಾನ್ಯ ಶಿಕ್ಷಕರ ಕ್ಷೇತ್ರದ ಶಶೀಲ್ ಜಿ. ನಮೋಶಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪುಟ್ಟಣ್ಣ ನಿವೃತ್ತರಾಗುತ್ತಿರುವ ಸದಸ್ಯರುಗಳು. ಬ್ಯುರೋ ರಿಪೋರ್ಟ್ ಬೆಂಗಳೂರು. . Share this... Whatsapp Facebook Pinterest Twitter Linkedin Gmail Print Post navigation ಪ್ರಜೆಗಳ ಕುಂದುಕೊರತೆ ಪರಿಹಾರಕ್ಕೆ ಪ್ರಜಾಸೇವಾ ಉತ್ತಮ ವೇದಿಕೆ ತೆನೆ ಇಳಿಸಿ ಕೈ ಹಿಡಿಯುತ್ತಾರಾ ಮಾಜಿ ಶಾಸಕ!?